ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಬೆಳ್ತಂಗಡಿ ಫಾರೆಸ್ಟ್ ಗಾರ್ಡ್ ನೇಣಿಗೆ ಶರಣು

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿಯಾಗಿರುವ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.3 ರಂದು ವರದಿಯಾಗಿದೆ.ಬಾಲಕೃಷ್ಣ ಗೌಡರವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು.ಇಂದು ಬೆಳಿಗ್ಗೆ ಮನೆಯ ಪಕ್ಕದ ಗುಡ್ಡ ಪ್ರದೇಶದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಯಾವ ಕಾರಣಕ್ಕಾಗಿ ಈ ಕೃತ್ಯವೆಸಗಿದ್ದಾರೆ ಎಂಬುವುದು ತನಿಖೆಯಿಂದ ತಿಳಿದುಬರಬೇಕಾಗಿದೆ.ಈ ಬಗ್ಗೆ […]

ಚರ್ಚ್ ವತಿಯಿಂದ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಉದ್ಯೋಗವಿಲ್ಲದೇ ಸಂಕಷ್ಟದಲ್ಲಿರುವ 70 ಬಡ ಕುಟುಂಬಿಕರಿಗೆ ಬೆಳ್ತಂಗಡಿಯ ಹೋಲಿ ರೆಡಿಮರ್ ಚರ್ಚ್ ವತಿಯಿಂದ ಆಹಾರ ಧಾನ್ಯಗಳ ಕಿಟ್ ವಿತರಿಸುವ ಕಾರ್ಯಕ್ರಮವು ಜೂನ್ 3ರಂದು ಚರ್ಚ್ ವಠಾರದಲ್ಲಿ ನಡೆಯಿತು‌.ಈ ಸಂದರ್ಭಸಲ್ಲಿ ಸಾಂಕೇತಿಕವಾಗಿ ಕಿಟ್ ವಿತರಿಸಿ ಆಶೀರ್ವಚನ ನೀಡಿದ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಜೋಸೆಫ್ ಕಾರ್ಡೋಝ, ಮನುಕುಲವನ್ನು ಹಿಂಸಿಸಿ ಕಾಡುತ್ತಿರುವ ಮಹಾಮಾರಿ ಕೊರೋನಾ ಸೋಂಕು ದೇವರ ದಯೆಯಿಂದ ಸಂಪೂರ್ಣ ನಿರ್ಮೂಲನವಾಗಲಿ ಎಂದು ಹಾರೈಸಿದರು‌.ಬೆಳ್ತಂಗಡಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯ […]

ಕಥೋಲಿಕ್ ಸೊಸೈಟಿಯಿಂದ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಕೊರೋನಾ ಸಾಂಕ್ರಾಮಿಕ ರೋಗ ತಡೆಗಟ್ಟುವ ಉದ್ಧೇಶದಿಂದ ಸರಕಾರ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ಸಾಕಷ್ಟು ಕುಟುಂಬಿಕರು ಸಂಕಷ್ಟವನ್ನೆದುರಿಸುತ್ತಿದ್ದು; ಇಂತಹ ಕುಟುಂಬಿಕರ ನೆರವಿಗೆ ತನ್ನ ಕೈಲಾದ ಸೇವೆ ಸಲ್ಲಿಸಲು ಕಾರ್ಯಯೋಜನೆ ರೂಪಿಸಿರುವ ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ, ತಾಲೂಕಿನ ಆಯ್ದ 50ಬಡ ಕುಟುಂಬಿಕರಿಗೆ ಅಂದಾಜು 50ಸಾವಿರ ರೂಪಾಯಿ ಮೌಲ್ಯದ ದಿನಬಳಕೆ ಆಹಾರಧಾನ್ಯಗಳ ಕಿಟ್ ವಿತರಣೆಗೆ ಮೇ 29ರಂದು ಸೊಸೈಟಿಯ ಎದುರುಗಡೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾಂಕೇತಿಕವಾಗಿ ಕಿಟ್ ವಿತರಿಸಿ ಮಾತನಾಡಿದ ಬೆಳ್ತಂಗಡಿಯ ಶಾಸಕ ಹರೀಶ್ […]

ಬೆಳ್ತಂಗಡಿ ಚರ್ಚ್ ಗುರುಗಳಿಂದ ಪಡ್ಲಾಡಿಯ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಲಾಯಿಲ ಗ್ರಾಮದ ಪಡ್ಲಾಡಿಯ ಸೀಲ್‌ಡೌನ್ ಆಗಿರುವ ಮನೆಗಳಿಗೆ ಹಾಗೂ ಇತರ ಪಾಸಿಟಿವ್ ಪ್ರಕರಣಗಳಿರುವ ಮನೆಗಳಿಗೆ ಆಹಾರ ಕಿಟ್ಟನ್ನು ಬೆಳ್ತಂಗಡಿ ಚರ್ಚ್ ಧರ್ಮಗುರುಗಳು ನೀಡಿದರು.ಬೆಳ್ತಂಗಡಿ ಕ್ಯಾಥೋಲಿಕ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಜೋಸೆಫ್ ಆಲ್ಫೋನ್ಸ್ ಕಾರ್ಡೊಜ ಅವರು ವೈಯಕ್ತಿಕ ನೆಲೆಯಲ್ಲಿ ಪಡ್ಲಾಡಿ ವಿಲಿಯಂ ವೇಗಸ್ ಮನವಿಗೆ ಸ್ಪಂದಿಸಿ ಕೊರೊನಾ ಪಾಸಿಟಿವ್ ಇರುವ ಸುಮಾರು 20 ಕುಟುಂಬಗಳಿಗೆ ಆಹಾರದ ಕಿಟ್ ನೀಡಿದರು. ಸಂಕಷ್ಟದ ಸಂದರ್ಭದಲ್ಲಿ ಅಶಕ್ತರಿಗೆ ಕಿಟ್ ನೀಡಿ ಸಹಕರಿಸಿದ ಚರ್ಚ್‌ನ ಧರ್ಮಗುರುಗಳಿಗೆ […]

ಗ್ರಾಮೀಣ ಜನರ ಆರೋಗ್ಯದ ಬಗ್ಗೆ ಕಾಳಜಿ- ‘ವೈದ್ಯರ ನಡಿಗೆ ಹಳ್ಳಿಯ ಕಡೆಗೆ’ ಅಭಿಯಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಜನರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರಿಸಿ, ಜಿಲ್ಲಾಡಳಿತದ ಸೂಚನೆಯಂತೆ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ವೈದ್ಯರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಅಭಿಯಾನವನ್ನು ನಡೆಸಲಾಗುತ್ತದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಜೂನ್ 1ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆದ ಗ್ರಾಮ ಪಂಚಾಯತ್ ವಾರ್ ಕೋವಿಡ್-19 ನಿರ್ವಹಣಾ ಮತ್ತು ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆಯನ್ನುದ್ಧೇಶಿಸಿ ಮಾತನಾಡುತ್ತಿದ್ದರು.ಗ್ರಾಮೀಣ ಪ್ರದೇಶಗಳಲ್ಲಿ ವಯಸ್ಸಾದವರು ಬೇರೆಬೇರೆ ಆರೋಗ್ಯ […]

ಕವಿ ವಿಭೂಷಣ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ

ಬೆಳ್ತಂಗಡಿ: ಬೆಳಗಾವಿಯ ಕಸ್ತೂರಿ ಕನ್ನಡ ಸಿರಿಗನ್ನಡ ವೇದಿಕೆಯು ಬೆಳ್ತಂಗಡಿ ತಾಲೂಕು ಮುಂಡಾಜೆಯ ವಿದ್ಯಾಶ್ರೀ ಅಡೂರ್‌ರವರನ್ನು ರಾಜ್ಯ ಮಟ್ಟದ ‘ಕವಿ ವಿಭೂಷಣ’ ಪ್ರಶಸ್ತಿ ನೀಡಿ ಪುರಸ್ಕರಿಸಲು ಆಯ್ಕೆ ಮಾಡಿದೆ.ವಿದ್ಯಾಶ್ರೀ ಅಡೂರ್‌ರವರು ಕನ್ನಡ ಸಾಹಿತ್ಯ, ಭಾಷೆ, ನೆಲ-ಜಲ, ಸಂಸ್ಕೃತಿ ಸಹಿತ ಸಿರಿಗನ್ನಡ ಕ್ಷೇತ್ರಕ್ಕೆ ನೀಡಿದ ಗಣನೀಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿದ ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವಿದ್ಯಾಶ್ರೀ ಅಡೂರ್‌ರವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜೂನ್ 5ರಂದು ಅಂತರ್ಜಾಲದ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ವಿದ್ಯಾಶ್ರೀ […]

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ದಾಳಿ

ಬೆಳ್ತಂಗಡಿ: ಖಚಿತ ಮಾಹಿತಿಯ ಮೇರೆಗೆ ಜೂನ್ 1ರ ಬೆಳಿಗ್ಗೆ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಯಲ್ಲಿನ ಅಕ್ರಮ ಮದ್ಯ ಮಾರಾಟದ ಅಡ್ಡೆಗೆ ತನ್ನ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಬ್‌ಇನ್ಸ್‌ಪೆಕ್ಟರ್ ಜೆ. ಸೌಮ್ಯಾ; ಮಾರಾಟದ ಉದ್ಧೇಶಕ್ಕಾಗಿ ಅಕ್ರಮವಾಗಿ ದಾಸ್ತಾನಿರಿಸಿದ ರೂಪಾಯಿ 42,356/- ಅಂದಾಜು ಮೌಲ್ಯದ 58.68ಲೀಟರ್ ಮದ್ಯ ಹಾಗೂ ರೂಪಾಯಿ 14,125/- ಅಂದಾಜು ಮೌಲ್ಯದ 82.53ಲೀಟರ್ ಬಿಯರ್‌ನ್ನು ಸ್ವಾದೀನ ಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]

ಜಲಜೀವನ ಮಿಷನ್ ಅಡಿಯಲ್ಲಿ ನೂತನ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಜಲ ಜೀವನ್ ಮಿಷನ್ ಅಡಿಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಒಟ್ಟು ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಟ್ಯಾಂಕ್‌ಗಳು ಹಾಗೂ ನೀರು ಸರಬರಾಜಿಗೆ ಸಂಬಂಧಪಟ್ಟ ಪೈಪ್‌ಲೈನ್ ಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಜೂನ್ 1ರಂದು ಲಾಯಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂಟಿನಿ ಎಂಬಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ ಅಂದಾಜು 30ಲಕ್ಷ ರೂಪಾಯಿ ವೆಚ್ಚದ ನೂತನ ನೀರಿನ ಟ್ಯಾಂಕ್ […]

ಜೀವ ಉಳಿಸಿ – ಜೀವನ ರಕ್ಷಿಸಿ ಎಂಬ ಘೋಷಣೆಯಡಿ ಪ್ರತಿಭಟನೆ

ಬೆಳ್ತಂಗಡಿ: ಕೋವಿಡ್ ಎರಡನೇ ಅಲೆಯಿಂದ ಜೀವ ಉಳಿಸಿ-ಜೀವನ ರಕ್ಷಿಸಿ; ಮೂರನೇ ಅಲೆ ಎದುರಿಸಲು ಸರ್ವಸನ್ನದ್ಧರಾಗಿ ಎಂಬ ಘೋಷಣೆಗಳಡಿ 7 ಎಡಪಕ್ಷಗಳ ಒಕ್ಕೂಟದ ಕರೆಯಂತೆ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿಪಿಐ(ಎಂ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ ಮತ್ತು ಚಿಕಿತ್ಸೆಗಾಗಿ;ರೈತರು, ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ; 200 ದಿನಗಳ ಉದ್ಯೋಗ ಖಾತ್ರಿಗಾಗಿ; ನಗರಗಳಿಗೂ ಉದ್ಯೋಗ ಖಾತರಿ ಯೋಜನೆಯ ವಿಸ್ತರಣೆಗಾಗಿ;ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ […]

ಅಭಯಚಂದ್ರ ಜೈನ್ ಅವರಿಂದ 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಔಷಧಿ ಕಿಟ್ ವಿತರಣೆ

ಮೂಡಬಿದಿರೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡಬಿದಿರೆಯ ಪುರಸಭಾ ವ್ಯಾಪ್ತಿಯ ಸುಮಾರು 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಹೋಮ್ ಐಸೊಲೇಷನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ಭಾಗವಹಿಸಿ ಕಿಟ್ ಗಳನ್ನು ವಿತರಿಸಿದರು.ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಯ ಕುಮಾರ್ ಶೆಟ್ಟಿ, ವಕ್ತಾರರಾದ ರಾಜೇಶ್ ಕಡಲಕೆರೆ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಸುರೇಶ್ […]