ಧರ್ಮಸ್ಥಳದ ಬೊಳಿಯಾರು ತಾಲೂಕಿನ ಪ್ರಥಮ ಕಂಟೈನ್‌ಮೆಂಟ್ ಝೋನ್

ಬೆಳ್ತಂಗಡಿ: ತಾಲೂಕು ಆಡಳಿತದ ಸೂಚನೆಯಂತೆ 30ಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ಧರ್ಮಸ್ಥಳ ಗ್ರಾಮದ ಬೊಳಿಯಾರು ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಬೊಳಿಯಾರು ಪ್ರದೇಶದವರು ಯಾರು ಕೂಡ ಹೊರಗೆ ಹೋಗುವಂತಿಲ್ಲ. ಸದ್ರಿ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಸದ್ರಿ ಪ್ರದೇಶಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿದೆ. ದಿನದ ಅಗತ್ಯ ವಸ್ತುಗಳಿಗೆ ಗ್ರಾಮ ಪಂಚಾಯತಿನಿಂದ ಕ್ರಮವಹಿಸಲಾಗುವುದು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಜೈನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಸಿಬ್ಬಂದಿಗಳು, […]

ಕಲ್ಲು ಗಣಿಗಾರಿಕೆಗೆ ವಿರೋಧ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊರಂಬಾಡ್ ಪ್ರದೇಶದಲ್ಲಿ ಸ್ಥಳೀಯ ವ್ಯಕ್ತಿಯೊರ್ವರು ಕಲ್ಲು ಗಣಿಗಾರಿಕೆಗೆ ಸಿದ್ದತೆಯನ್ನು ನಡೆಸುತ್ತಿದ್ದು, ಈ ಪರಿಸರದಲ್ಲಿ ಹಲವಾರು ಮನೆಗಳು, ತೋಟಗಳು ಇದ್ದು ಮುಂದೆ ಸಾಕಷ್ಟು ಅನಾಹುತವಾಗುವ ಸಂಭವವಿದೆ. ಆದ್ದರಿಂದ ಈ ಕಲ್ಲು ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಪರವಾನಿಗೆಯನ್ನು ನೀಡಬಾರದು ಎಂದು ಇಂದು ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತ್‌ಗೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಲೋಕಯ್ಯ ಪೂಜಾರಿ, ಉಪಾಧ್ಯಕ್ಷೆ ಶ್ವೇತಾ ಪರಮೇಶ್ವರ, ಸದಸ್ಯರಾದ ಜಗದೀಶ್ ಹೆಗ್ಡೆ , […]

ತೆಂಗಿನ ಮರ ಬಿದ್ದು ಮನೆಗೆ ಹಾನಿ

ಬೆಳ್ತಂಗಡಿ: ಮೇ 1ರಂದು ಸುರಿದ ಭಾರೀ ಗಾಳಿಮಳೆಗೆ ತೆಂಗಿನ ಮರವೊಂದು ಸುಲ್ಕೇರಿಮೊಗ್ರು ಗ್ರಾಮದ ಕಂಬ್ಳದಡ್ಡ ನಾರಾಯಣ ಮಡಿವಾಳರ ಮನೆಗೆ ಬಿದ್ದ ಪರಿಣಾಮ ಮನೆಯ ಪಾರ್ಶವೊಂದು ಕುಸಿದುಬಿದ್ದಿದೆ. ನಷ್ಟದ ಅಂದಾಜು ಇನ್ನಷ್ಟೇ ತಿಳಿಯಬೇಕಾಗಿದೆ.

ಕಾರ್ಮಿಕ ವಿರೋಧಿ ಕೇಂದ್ರ ಸರಕಾರದ ವಿರುದ್ಧ ಸಂಘಟಿತ ಹೋರಾಟ ಅಗತ್ಯ;ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಎಸ್.ಎಂ.ಎಸ್.

ಬೆಳ್ತಂಗಡಿ: ಬಿಜೆಪಿ ನೇತೃತ್ವದ ನರೇಂದ್ರ ಮೋದಿಯ ಸರ್ವಾಧಿಕಾರಿ ಆಡಳಿತ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುವ ಮೂಲಕ ದೇಶದ ರೈತ- ಕಾರ್ಮಿಕರು ನರಕಯಾತನೆ ಅನುಭವಿಸುವಂತಾಗಿದೆ. ಇದರ ವಿರುದ್ಧ ರೈತ ಹಾಗೂ ಕಾರ್ಮಿಕರ ಐಕ್ಯತೆಯ-ಸಂಘಟಿತ ಹೋರಾಟ ಅಗತ್ಯವಿದೆ ಎಂದು ಸಿಐಟಿಯು ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಶಿವಕುಮಾರ್ ಎಸ್. ಎಂ. ಕಾರ್ಮಿಕ ವರ್ಗಕ್ಕೆ ಕರೆ ನೀಡಿದರು.ಬೆಳ್ತಂಗಡಿಯ ಅನನ್ಯದಲ್ಲಿ ಮೇ 1ರಂದು ಅತ್ಯಂತ ಸರಳವಾಗಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ಕೇಂದ್ರದ ಬಿಜೆಪಿ ಸರ್ಕಾರ […]

ನಿವೃತ್ತ ಸಹಕಾರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೆರಿಯ ಶಾಖೆಯಲ್ಲಿ ಶಾಖಾ ಪ್ರಬಂಧಕರಾಗಿ ಸೇವೆ ಸಲ್ಲಿಸಿ ಎಪ್ರಿಲ್ 30ರಂದು ವಯೋ ನಿವೃತ್ತಿ ಹೊಂದಿದ ಸಹಕಾರಿ ಎಂ. ಎಸ್. ಕರುಣಾಕರ ಗೌಡರ ಸುದೀರ್ಘ ಸೇವೆಯನ್ನು ಗುರುತಿಸಿ, ಸಂಘದ ಮುಂಡಾಜೆ ಕೇಂದ್ರ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ನೂಜಿ ಜನಾರ್ದನ ಗೌಡ, ಉಪಾಧ್ಯಕ್ಷ ಪ್ರಕಾಶ್ ನಾರಾಯಣ ರಾವ್ ಹಾಗೂ ಸಿಇಒ ನಾರಾಯಣ ಫಡ್ಕೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಳಕು ಸೇವಾ ಪ್ರತಿಷ್ಠಾನದಿಂದ ನೆರವು

ಬೆಳ್ತಂಗಡಿ: ಬೆಳಕು ಸೇವಾ ಪ್ರತಿಷ್ಠಾನ ಬೆಳ್ತಂಗಡಿಯ ವತಿಯಿಂದ  ಕುವೆಟ್ಟು ಗ್ರಾಮದ ಅಮರ್ಜಾಲ್  ಕೋಡಿ ನಿವಾಸಿ ಸದಾಶಿವ ಸಪಲ್ಯ ದಂಪತಿಗಳ ಸುಪುತ್ರಿ ಅರ್ಪಿತಾಳ (17) ಹೃದಯ ಶಸ್ತ್ರಚಿಕಿತ್ಸೆಗಾಗಿ ಎಪ್ರಿಲ್ 21ರಂದು ಉಜಿರೆ ಶ್ರೀ ರಾಮಕೃಷ್ಣ ಸಭಾ ಭವನದಲ್ಲಿ ಪದಾಧಿಕಾರಿಗಳು ಉಪಸ್ಥಿತರಿದ್ದು, ಆರ್ಥಿಕ ನೆರವಿನ ಚೆಕ್ಕನ್ನು  ಹಸ್ತಾಂತರಿಸಲಾಯಿತು.      ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಮೊಕ್ತೇಸರ ಶರತ್‌ಕೃಷ್ಣ  ಪಡುವೆಟ್ನಾಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್, ಶೆಟ್ಟಿ, ಸುವರ್ಣ ಸಾಂಸ್ಕೃತಿಕ  ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ, ಆರ್.ಎಸ್.ಎಸ್. ಪ್ರಮುಖ್ ದಿನಕರ […]

ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ(ರಿ) ನ ನೂತನ ಸಭಾಭವನಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ಅಯ್ಯಪ್ಪ ಭಜನಾ ಮಂದಿರ ದ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ತುಳು  ಶಿವಳ್ಳಿ ಸಭಾ(ರಿ) ನೇತೃತ್ವದಲ್ಲಿ  ನಿರ್ಮಾಣಗೊಳ್ಳಲಿರುವ  ಸುಮಾರು ಒಂದೂವರೆ ಕೋಟಿ ರೂಪಾಯಿ ವೆಚ್ಚದ  ನೂತನ ಸಭಾಭವನಕ್ಕೆ  ಎಪ್ರಿಲ್ 29ರಂದು ಮುಂಜಾನೆ  7.10ರ ಶುಭ ಮುಹೂರ್ತದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. . ವೇದಮೂರ್ತಿ ರಾಮಕೃಷ್ಣ  ಕಲ್ಲೂರಾಯರ ಪೌರೋಹಿತ್ಯದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷಾಬಲಿ, ಭೂವರಾಹ ಹೋಮ ಮತ್ತಿತರ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ  ಶ್ರೀ ಅಯ್ಯಪ್ಪ ಸ್ವಾಮಿ ಹಾಗೂ ಪರಿವಾರ ಸಾನ್ನಿಧ್ಯದಲ್ಲಿ ವಿಶೇಷ ಪ್ರಾರ್ಥನೆ-ಪೂಜೆ ಸಲ್ಲಿಸಿ ಸಮಾಜದ ಗೌರವಾಧ್ಯಕ್ಷರು […]

ಕೋವಿಡ್ ಕೇರ್ ಸೆಂಟರ್‌ನ ಸಿದ್ಧತೆ ಪರಿಶೀಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸುಪರ್ದಿಯಲ್ಲಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ‌ ಮತ್ತು ಸಂಶೋಧನಾ ಕೇಂದ್ರದಲ್ಲಿ ಆರಂಭಿಸಲಾಗುವ ವಿಶೇಷ ಕೋವಿಡ್ ಕೇರ್ ಸೆಂಟರ್‌ನ ಸಿದ್ಧತೆಯನ್ನು ಎಪ್ರಿಲ್ 29ರಂದು ಪರಿಶೀಲಿಸಿದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ವ್ಯವಸ್ಥೆಯ ದೃಷ್ಟಿಯಿಂದ ಸೂಕ್ತ ಸಲಹೆ-ಸೂಚನೆ ನೀಡಿದರು.ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸಿದ್ಧವಾಗುತ್ತಿರುವ ಈ ವಿಶೇಷ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂಪೂರ್ಣ […]

ಗ್ರಾಹಕರ ಪ್ರೀತಿಗೆ ಪಾತ್ರವಾದ ಕಥೋಲಿಕ್ ಸೊಸೈಟಿ;ಅಳದಂಗಡಿಯ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿ ಶಾಸಕ ಪೂಂಜ

ಬೆಳ್ತಂಗಡಿ: ತನ್ನ ಆರ್ಥಿಕ ಚಟುವಟಿಕೆಗಳ ಮೂಲಕ ಗ್ರಾಹಕರಿಗೆ ಸಕಾಲದಲ್ಲಿ ಸ್ಪಂದಿಸಿ, ಗ್ರಾಹಕರಲ್ಲಿ ವಿಶ್ವಾಸ ಮೂಡಿಸಿರುವ ಬೆಳ್ತಂಗಡಿಯ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಗ್ರಾಹಕರ ಪ್ರೀತಿಗೆ ಪಾತ್ರವಾಗಿ ಎತ್ತರಕ್ಕೆ ಬೆಳೆಯುತ್ತಿದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಎಪ್ರಿಲ್ 26ರಂದು ಅಳದಂಗಡಿಯ ಎಜಿಎಸ್ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡ ಬೆಳ್ತಂಗಡಿಯ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಅಳದಂಗಡಿ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಅಳದಂಗಡಿ ಸಂತ ಪೀಟರ್ ಕ್ಲೆವರ್ ಚರ್ಚ್‌ನ ಧರ್ಮಗುರು ವಂದನೀಯ ನವೀನ್ ಪಿಂಟೊ ಆಶೀರ್ವಚನ ನೀಡುತ್ತಾ, ದುಡಿಮೆಗೆ ಪ್ರತಿಫಲ […]

ಖಾಸಗಿ ಆಸ್ಪತ್ರೆಗಳನ್ನು ಸರಕಾರದ ಸುಪರ್ದಿಗೆ ಪಡೆಯಲು ಆಗ್ರಹ

ಬೆಳ್ತಂಗಡಿ: ಕೋವಿಡ್ ಎರಡನೇ ಅಲೆಯನ್ನು ಸಮಾರೋಪಾದಿಯಲ್ಲಿ ನಿಯಂತ್ರಣ ಮಾಡಲು ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಬೆಳ್ತಂಗಡಿ ತಾಲೂಕು ಸಮಿತಿ ಕೇಂದ್ರ, ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದೆ.ಎಪ್ರಿಲ್ 28ರಂದು ಬೆಳ್ತಂಗಡಿ ತಹಶೀಲ್ದಾರರ ಮೂಲಕ ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕರ್ನಾಟಕ ಪ್ರಾಂತ ರೈತ ಸಂಘದ ನಿಯೋಗವು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಳೆದ ಒಂದು ವರ್ಷಗಳಿಂದ ಕೋವಿಡ್-19 ಬಗ್ಗೆ ನಿರ್ಲಕ್ಷ್ಯ ವಹಿಸಿದ ಕಾರಣದಿಂದಾಗಿ […]