ಪತ್ರಕರ್ತರ ಸಂಘದಿಂದ ಸಾಧಕರಿಗೆ ಸಮ್ಮಾನ

ಬೆಳ್ತಂಗಡಿ: ಸಾಧಕರನ್ನು ಗುರುತಿಸಿ ಅವರನ್ನು ಸಮಾಜಕ್ಕೆ ಪರಿಚಯಿಸುವಂತಹ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಬೆಳ್ತಂಗಡಿ ಪತ್ರಕರ್ತರು ಮುಂಚೂಣಿಯಲ್ಲಿದ್ದಾರೆ ಎಂದು ಶ್ರೀ.ಧ.ಮಂ. ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಸತೀಶ್ಚಂದ್ರ ಹೇಳಿದರು.ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದವತಿಯಿಂದ ನವೆಂಬರ್ 28ರಂದು ನಡೆದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸಮ್ಮಾನಿಸಿ ಅವರು ಮಾತನಾಡಿದರು.ನಮ್ಮ ಸಂಸ್ಕೃತಿಯಲ್ಲಿ ಗುರುಗಳಿಗೆ ಮಹತ್ತರ ಸ್ಥಾನವಿದೆ. ಅವರು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಗುರುತಿಸಿ ಬೆಳೆಸಿದರೆ, ಪತ್ರಕರ್ತರು ಅವರನ್ನು ಸಮಾಜಕ್ಕೆ ಪರಿಚಯಿಸುತ್ತಾರೆ. ವಿವಿಧ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು […]
‘ಸಾರ್ವಜನಿಕ ಸಂಸ್ಥೆಗಳನ್ನು ಚಹಾದಂತೆ ಮಾರುತ್ತಿರುವ ಮೋದಿ’

ಬೆಳ್ತಂಗಡಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತನ್ನ 6 ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ಸಂಸ್ಥೆಗಳಾದ ವಿಮಾನ, ರೈಲ್ವೆ, ವಿಮೆ, ಬಂದರು, ಬ್ಯಾಂಕುಗಳನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಚಹಾ ಮಾರಿದಂತೆ ಮಾರಾಟ ಮಾಡುತ್ತಿದ್ದಾರೆ ಎಂದು ಸಿಐಟಿಯು ತಾಲೂಕು ಅಧ್ಯಕ್ಷ, ಹಿರಿಯ ನ್ಯಾಯವಾದಿ ಶಿವಕುಮಾರ್ ಎಸ್. ಎಂ. ಆರೋಪಿಸಿದರು.ಅವರು ನವೆಂಬರ್ 27ರಂದು ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ (JCTU) ಕರೆ ನೀಡಿದ ಅಖಿಲ ಭಾರತ ಮುಷ್ಕರ ಬೆಂಬಲಿಸಿ ಸಿಐಟಿಯು ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನಸೌಧದ […]
ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73 ನೇ ಹುಟ್ಟುಹಬ್ಬದ ಸಂದರ್ಭ ನಾಡಿನ ಗಣ್ಯರು, ಅಭಿಮಾನಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಡಾ. ಹೆಗ್ಗಡೆಯವರಿಗೆ ಶುಭ ಹಾರೈಸಿದರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೆಗ್ಗಡೆಯವರ ಕುಟುಂಬಸ್ಥರು ಜೊತೆಗಿದ್ದರು. ಡಾ.ಹೆಗ್ಗಡೆಯವರ ಹುಟ್ಟು ಹಬ್ಬದ ಸಂದರ್ಭ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರ ಕಲ್ಪನೆಯಂತೆ ಧರ್ಮಸ್ಥಳ ಗ್ರಾಮಾಭಿವೃದ್ದಿ […]
ಅಂಗನವಾಡಿ ಕಾರ್ಯಕರ್ತೆಯರು ಊರ ಎಲ್ಲ ಮಕ್ಕಳ ಅಮ್ಮ-ಹರೀಶ್ ಪೂಂಜಾ

ಬೆಳ್ತಂಗಡಿ: ಪ್ರೀತಿ, ವಿಶ್ವಾಸ ಹಾಗೂ ಶ್ರದ್ಧೆಯಿಂದ ಮಕ್ಕಳ ಲಾಲನೆ-ಪಾಲನೆಯ ಜೊತೆಗೆ ಪೋಷಣೆ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಊರಿನ ಎಲ್ಲ ಮಕ್ಕಳಿಗೂ ಪ್ರೀತಿಯ ಅಮ್ಮನಾಗಿದ್ದಾರೆ. ಅಂತಹ ಅಂಗನವಾಡಿ ಕಾರ್ಯಕರ್ತರು ಇನ್ನಷ್ಟು ಉತ್ಸಾಹದಿಂದ ಜವಾಬ್ದಾರಿ ನಿರ್ವಹಿಸಿ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವಂತಾಗಲು, ಆ ಮೂಲಕ ಎಲ್ಲ ಮಕ್ಕಳ ಪೌಷ್ಟಿಕತೆ ಕಡೆಗೆ ಗಮನ ಹರಿಸುವಂತಾಗಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕೇಂದ್ರ ಸರಕಾರದಿಂದ ಇಂದು ಎಲ್ಲ ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಬೆಳ್ತಂಗಡಿಯ ಶಾಸಕ […]
ಬಿಗ್ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಪೇಟೆಯಲ್ಲಿ ಸ್ಪೋಟಿಸಿದ ಕೆಂಪು ಪಟಾಕಿ ಬೆಳ್ತಂಗಡಿ: ರಾಜ್ಯ ಸರಕಾರವೇನೋ ಒಮ್ಮೆ ಈ ಬಾರಿಯ ದೀಪಾವಳಿಗೆ ಪಟಾಕಿ ನಿಷೇಧಿಸಿತು. ನಂತರ ಹಸಿರು ಪಟಾಕಿಗೆ ಹಸಿರು ನಿಶಾನೆ ತೋರಿಸಿತು. ಜನಸಾಮಾನ್ಯರು ಈ ಹಸಿರು ಪಟಾಕಿ ಏನು ಎಂಬುದರ ಬಗ್ಗೆಯೇ ಗೊಂದಲದಲ್ಲಿದ್ದಾರೆ. ಪಟಾಕಿ ಮಾರಾಟಗಾರರು ಈಗಾಗಲೇ ದಾಸ್ತಾನಿರಿಸಿ, ಮಾರಾಟಕ್ಕೆ ಸಿದ್ಧ ಪಡಿಸಿದ ಪಟಾಕಿ ಯಾವುದು? ಹಸಿರು ಪಟಾಕಿ ಯಾವಾಗ ಬರ್ತದೆ? ಹಸಿರು ಪಟಾಕಿ ಹ್ಯಾಗಿರ್ತದೆ? ಯಾವುದಕ್ಕೂ ಸ್ಪಷ್ಟತೆ ಇಲ್ಲ.ಈ ನಡುವೆ ನವೆಂಬರ್ 11ರ ರಾತ್ರಿ ಬೆಳ್ತಂಗಡಿ ಪೇಟೆಯಲ್ಲಿ ಮೂರ್ನಾಲ್ಕು ಬಾರಿ […]
ಜೈನ್ ಮಿಲನ್ – ನೂತನ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ವಲಯ 8ರ ಬೆಳ್ತಂಗಡಿ ಶಾಖೆಯ 2020-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಭವನದಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಲಯದ ಉಪಾದ್ಯಕ್ಷ ವೀರ್ ಬಿ. ಸುದರ್ಶನ್ ಜೈನ್ ಮಾತನಾಡಿ, ಜೈನ್ ಮಿಲನ್ ಕಾರ್ಯಕ್ರಮಗಳ ಕುರಿತು ಮಾರ್ಗದರ್ಶನ ನೀಡಿದರು. ವಲಯ 8ರ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಕರ್ತವ್ಯಗಳ ಬಗ್ಗೆ ತಿಳಿಸಿದರು. ಸಭೆಯ […]
ಹಾಡುಗಾರಿಕಾ ಸ್ಪರ್ಧೆ ‘ಪ್ರಕಾಶ್ ಗಾನಾಂಜಲಿ’

‘ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ ಆಶ್ರಯದಲ್ಲಿ ರೋಟರಿ ವಲಯ 4ರ ಕ್ಲಬ್‌ಗಳ ಸದಸ್ಯರಿಗಾಗಿ ಹಾಡುಗಾರಿಕಾ ಸ್ಪರ್ಧೆ ‘ಪ್ರಕಾಶ ಗಾನಾಂಜಲಿ’ ಲಾಯ್ಲದ ಸುಬ್ರಹ್ಮಣ್ಯ ಸದನದಲ್ಲಿ ನವೆಂಬರ್ 8ರಂದು ನಡೆಯಿತು.ರೋಟರಿ ಜಿಲ್ಲೆ 3181-ವಲಯ 4ರ 10 ಕ್ಲಬ್‌ಗಳ ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಇತ್ತೀಚೆಗೆ ವಿಧಿವಶರಾದ ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯ ಸ್ವತಹ ಉತ್ತಮ ಗಾಯಕರಾದ ಪ್ರಕಾಶ್ ತುಳುಪುಳೆಯವರ ನೆನಪಿನಲ್ಲಿ ಈ ಸ್ಪರ್ಧೆಯನ್ನು ಅಯೋಜಿಸಿ ಇದಕ್ಕೆ ಪ್ರಕಾಶ ಗಾನಂಜಲಿ ಎಂದು ಹೆಸರಿಸಲಾಗಿತ್ತು. ಕಾರ್ಯಕ್ರಮವನ್ನು ದಿವಂಗತ ಪ್ರಕಾಶ ತುಳುಪುಳೆಯವರ ಸಹೋದರ ಡಾl ಎನ್. […]
ಬಳಂಜ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಬಳಂಜದ ಸಂಘದ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್. ಎಸ್.ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಗೌರವಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಕಾರ್ಯದರ್ಶಿ ಯೋಗೀಶ್ ಆರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಬಳ್ಳಿದಡ್ಡ, ಕೋಶಾಧಿಕಾರಿ ದಿನೇಶ್ ಪೂಜಾರಿ ಅಂತರ, ಮಹಿಳಾ ಬಿಲ್ಲವ ವೇದಿಕೆ […]
ಬಂಟರ ಸಂಘದಿಂದ ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ನೆರವು

ಬೆಳ್ತಂಗಡಿ: ಉತ್ತಮ ವಿದ್ಯಾಭ್ಯಾಸ ಹಾಗೂ ಸಾಧನೆಗಳನ್ನು ಮಾಡುವ ಮೂಲಕ ವಿಧ್ಯಾರ್ಥಿಗಳು ಸಮಾಜ ಗುರುತಿಸುವಂತಹ ಕೆಲಸವನ್ನು ಮಾಡಬೇಕು. ಅದಲ್ಲದೆ ಬಡ ವಿದ್ಯಾರ್ಥಿಗಳಿಗೆ ದಾನಿಗಳು ನೀಡುವ ಇಂತಹ ಪ್ರೋತ್ಸಾಹ ಧನದ ಪ್ರೇರಣೆಯಿಂದ ತಾವೂ ಕೂಡ ಬಡ ವಿದ್ಯಾರ್ಥಿಗಳಿಗೆ ಸಹಾಯಹಸ್ತ ಚಾಚುವಂತಹ ಕೆಲಸವನ್ನು ಮುಂದಿನ ದಿನಗಳಲ್ಲಿ ಮಾಡಬೇಕು ಎಂದು ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾದ ಉಪಪ್ರಾದೇಶಿಕ ಮುಖ್ಯಸ್ಥ ಹಾಗೂ ಒಲಿಂಪಿಯನ್ ಅರ್ಜುನ ಪ್ರಶಸ್ತಿ ಪುರಸ್ಕೃತ ಸತೀಶ್ ರೈ ಹೇಳಿದರು. ಅವರು ನವೆಂಬರ್ 8ರಂದು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ […]
ಶಿಕ್ಷಕ ಯಾಕೂಬ್‌ರಿಗೆ ಹುಟ್ಟೂರ ಗೌರವ

ಬೆಳ್ತಂಗಡಿ: ಪ್ರಸಕ್ತ ವರ್ಷದ ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯಿಂದ ಪುರಸ್ಕೃತರಾದ ಬೆಳ್ತಂಗಡಿ ತಾಲೂಕು ನಡ ಸರಕಾರಿ ಪ್ರೌಢ ಶಾಲಾ ಗಣಿತ ಶಿಕ್ಷಕ ಯಾಕೂಬ್ ಕೊಯ್ಯೂರುರವರನ್ನು ನವೆಂಬರ್ 8ರಂದು ಅವರ ಹುಟ್ಟೂರಾದ ಕೊಯ್ಯೂರಿನ ಆದೂರ್‌ಪೆರಾಲ್ ಪಂಚದುರ್ಗಾ ಸಭಾಭವನದಲ್ಲಿ ಊರ ವಿದ್ಯಾಭಿಮಾನಿಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಗೌರವಿಸಿ, ಸಮ್ಮಾನಿಸಿದರು.ಇದೇ ಸಂದರ್ಭದಲ್ಲಿ 2019-20 ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಿಗೆ 620 ಅಂಕ ಗಳಿಸಿ, ರಾಜ್ಯಮಟ್ಟದಲ್ಲಿ 4ನೇ ಸ್ಥಾನ ಗಳಿಸಿ, […]