ದೇವರಗುಡ್ಡೆ ಮಠದಲ್ಲಿ ಪ್ರಭು ಶ್ರೀರಾಮಚಂದ್ರನ ಮೂರ್ತಿ ಸ್ಥಾಪನೆ

ಬೆಳ್ತಂಗಡಿ : ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮಸ್ಮರಣೆ ಅಗತ್ಯ. ನಿಷ್ಠೆಯಿಂದ ಧರ್ಮಪಾಲನೆ ಮಾಡುವ ಮೂಲಕ ಸುಖ, ಶಾಂತಿ, ನೆಮ್ಮದಿಯ ಬದುಕು ನಮ್ಮದಾಗಿಸಿಕೊಳ್ಳಬೇಕು. ರಾಮ ಎಂಬ ಶಬ್ದ ನಮ್ಮ ಜೀವನಾಡಿ. ಸನಾತನ ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬರ ಮನೆಗಳಲ್ಲಿ ಶ್ರೀರಾಮ ನಾಮ ಜಪಿಸುವಂತಾಗಲಿ ಎಂದು ಧರ್ಮಸ್ಥಳ ನಿತ್ಯಾನಂದನಗರ ಶ್ರೀರಾಮಕ್ಷೇತ್ರದ ಸದ್ಗುರು ಬ್ರಹ್ಮಾನಂದಶ್ರೀಗಳು ನುಡಿದರು.ಅವರು ಆಗಸ್ಟ್ 5ರಂದು ಧರ್ಮಸ್ಥಳ ಕನ್ಯಾಡಿ ದೇವರಗುಡ್ಡೆ ಮಠದಲ್ಲಿ ಶ್ರೀರಾಮಚಂದ್ರ ಸಪರಿವಾರ ಮೂರ್ತಿಗಳ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠೆ ನೆರವೇರಿಸಿದ ಬಳಿಕ ಆಶಿರ್ವಚನ […]

ಮಳೆಗೆ ತಾಲೂಕಿನಲ್ಲಿ ಮೊದಲ ಮನೆ ಹಾನಿ ಪ್ರಕರಣ ದಾಖಲು

ಅದೃಷ್ಟವಶಾತ್ ಐವರೂ ಅಪಾಯದಿಂದ ಪಾರು ಬೆಳ್ತಂಗಡಿ: ಆಗಸ್ಟ್ 4 ರಂದು ಸುರಿದ ಭಾರೀ ಮಳೆಯೊಂದಿಗೆ ಬೀಸಿದ ಗಾಳಿಗೆ ಮೈಯೊಡ್ಡಿ ನಿಂತು, ತನ್ನನ್ನು ನಿರ್ಮಿಸಿದವರನ್ನು ರಕ್ಷಿಸುತ್ತಿದ್ದ ಬಡಪಾಯಿ ವ್ಯಕ್ತಿಯೋರ್ವರ ಮನೆಯೊಂದರ ಮೇಲ್ಛಾವಣಿಯು ಮಳೆಯಬ್ಬರಕ್ಕೆ ತಡೆದು ನಿಲ್ಲಲಾಗದೇ ಕುಸಿದು ಬಿದ್ಧ ದುರ್ಘಟನೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡೂರು ಗ್ರಾಮದ ಪರಂಬುಡೆಯಲ್ಲಿ ಸಂಭವಿಸಿದೆ. ಈ ಸಂದರ್ಭ ಮನೆಯೊಳಗಿದ್ದ ಐವರೂ ಸುದೈವವಶಾತ್ ಅಪಾಯದಿಂದ ಪಾರಾಗಿದ್ದಾರೆ. ಈ ವರ್ಷ ಮಳೆಗೆ ಹಾನಿಗೀಡಾದ ಮೊದಲ ಮನೆ ಇದಾಗಿದ್ದು, ಇದೇ ಕೊನೆಯಾಗಲಿ ಎಂಬ ಹಾರೈಕೆ ಸ್ಥಳೀಯರದ್ದು.ದುರ್ಘಟನೆಯಲ್ಲಿ […]

ಚಲಿಸುತ್ತಿದ್ದ ರಿಕ್ಷಾ ಮೇಲೆ ಬಿದ್ದ ಮರ

ಸುದೈವವಶಾತ್ ಪಾರಾದ ರಿಕ್ಷಾ ಚಾಲಕ ಬೆಳ್ತಂಗಡಿ: ಆಗಸ್ಟ್ 4ರ ಬೆಳಿಗ್ಗೆ ಸುರಿದ ಭಾರೀ ಗಾಳಿ-ಮಳೆಗೆ ಬೆಳ್ತಂಗಡಿ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ತೆಂಕಕಾರಂದೂರು ಪೆರಳ್ದರಕಟ್ಟೆ ಮಂಜೊಟ್ಟಿ ತಿರುವು ಬಳಿ ತೆಂಕಕಾರಂದೂರಿನ ಅಬೂಬಕ್ಕರ್ ಚಲಾಯಿಸುತ್ತಿದ್ದ ರಿಕ್ಷಾದ ಮೇಲೆ ರಸ್ತೆ ಬದಿಯಲ್ಲಿದ್ದ ಮರವೊಂದು ಬಿದ್ದು, ರಿಕ್ಷಾ ಜಖಂಗೊಂಡಿದೆ.ಮರ ಬಿದ್ದ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬ ಹಾಗೂ ತಂತಿಗಳು ವಾಲಿದ್ದು, ಸುದೈಶವಶಾತ್ ರಿಕ್ಷಾ ಚಾಲಕ ಅಬೂಬಕ್ಕರ್ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಮರ ಬಿದ್ದ ಪರಿಣಾಮ ಸುಮಾರು ಅರ್ಧ ಗಂಟೆಗಳ ಕಾಲ ವಾಹನಗಳು ಜಾಮ್ […]

ಚಲಿಸುತ್ತಿದ್ದ ಪಿಕ್‌ಅಪ್ ಮೇಲೆ ಬಿದ್ದ ವಿದ್ಯುತ್ ಕಂಬ

ಪುಣ್ಯವಶಾತ್ ತಪ್ಪಿದ ಭಾರೀ ದುರಂತ ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಆಗಸ್ಟ್ 3ರ ಸೋಮವಾರದಿಂದ ಸುರಿಯುತ್ತಿರುವ ಭಾರೀ ಗಾಳಿ-ಮಳೆಗೆ ತಾಲೂಕಿನ ಹಲವಡೆ ಅವಘಡ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದ್ದು; ಪಡಂಗಡಿ ಗ್ರಾಮದ ಕನ್ನಡಿಕಟ್ಟೆಯಲ್ಲರುವ ರಬ್ಬರ್ ನರ್ಸರಿ ಮುಂಭಾಗದಲ್ಲಿ ಗುರುವಾಯನಕೆರೆ ವಿದ್ಯುತ್ ಸಬ್‌ಸ್ಟೇಷನ್ ನಿಂದ ವೇಣೂರು ಸಬ್‌ಸ್ಟೇಷನ್ ಗೆ ಹೋಗುವ 33 ಕೆ.ವಿ. ವಿದ್ಯುತ್ ಕಂಬ ಆಗಸ್ಟ್ 4ರ ಬೆಳಿಗ್ಗೆ ಚಲಿಸುತ್ತಿದ್ದ ಪಿಕ್‌ಅಪ್ ವಾಹನದ ಮೇಲೆ ಬಿದ್ದು ವಾಹನ ಜಖಂಗೊಂಡಿದ್ದು; ಪುಣ್ಯವಶಾತ್ ವಾಹನದಲ್ಲಿದವರಿಗೆ ಯಾವುದೇ ಗಂಭೀರ ಸ್ವರೂಪದ ಗಾಯಗಾಳಾಗಲಿಲ್ಲ. […]

ಚಾರ್ಮಾಡಿ ಘಾಟಿ ಅಪಾಯ ಅಪಾಯ ಅಪಾಯ

ಬೆಳ್ತಂಗಡಿ : ಆಗಸ್ಟ್ 3ರಂದು ಬೆಳ್ತಂಗಡಿ ತಾಲೂಕಿನಲ್ಲಿ ಹಾಗೂ ಘಾಟಿ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ಅತ್ಯಂತ ದುರ್ಗಮವಾದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮಳೆಗಾಲದಲ್ಲಂತೂ ವಾಹನ ಸಂಚಾರ ತೀರಾ ಅಪಾಯಕಾರಿ ಎಂದು ಗೊತ್ತಿದ್ದರೂ ಇಲ್ಲಿ ಸಾಕಷ್ಟು ದುಸ್ಸಾಹಸಿಗರು ತಮ್ಮ ವಾಹನದಲ್ಲಿ ಪಯಣಿಸುತ್ತಲೇ ಇದ್ದಾರೆ. ಈ ರಸ್ತೆಯಲ್ಲಿ ಪಯಣಿಸುವ ದುಸ್ಸಾಹಸಕ್ಕೆ ಮುಂದಾಗುವ ಎಲ್ಲರೂ ಒಂದು ವಿಚಾರವನ್ನು ತಿಳಿದುಕೊಂಡಿರಬೇಕು; ‘ಮಳೆಗಾಲದಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ […]

ಆ್ಯಸಿಡ್ ಸೇವಿಸಿ ಸಾವಿಗೆ ಶರಣು

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ನಿವಾಸಿ ಯಶೋಧರರ ಪತ್ನಿ ಜಯಶ್ರೀ (23) ರಬ್ಬರ್ ಮರಗಳಿಗೆ ಹಾಕುವ ಆ್ಯಸಿಡ್ ಸೇವಿಸಿ ಸಾವಿಗೆ ಶರಣಾದ ಘಟನೆ ಜುಲೈ 30ರ ರಾತ್ರಿ ವರದಿಯಾಗಿದ್ದು; ಸಾವಿಗೆ ಶರಣಾಗಲು ಕಾರಣಗಳು ತಿಳಿದಿಲ್ಲ. ವಿವಾಹವಾಗಿ ಎರಡೂವರೆ ವರ್ಷಗಳು ಕಳೆದಿದ್ದು, ಪತಿ-ಪತ್ನಿ ತೀರಾ ಅನ್ಯೋನ್ಯವಾಗಿದ್ದರು ಎನ್ನಲಾಗಿದ್ದು; ಮಕ್ಕಳಾಗಲಿಲ್ಲವೆಂಬ ಕೊರಗು ಸಾವಿಗೆ ಶರಣಾಗಲು ಕಾರಣ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾ. ಪಂ. ಕಾರ್ಯನಿರ್ವಹಣಾಧಿಕಾರಿಯಾಗಿ ಕುಸುಮಾಧರ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ. ಇ. ಜಯರಾಮ್‌ರವರಿಗೆ ಸರಕಾರಕ್ಕೆ ವರದಿ ಮಾಡಿಕೊಳ್ಳುವುದು ಎಂದು ಸೂಚಿಸಿ, ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.ಇದರಿಂದ ತೆರವಾದ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ಈ ಹಿಂದೆ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ನಿರ್ದೇಶಕರಾಗಿ, ಒಂದಷ್ಟು ಕಾಲ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿದ್ದು; ಕಾರ್ಯನಿರ್ವಹಣಾಧಿಕಾರಿಯಾಗಿ ಪದೋನ್ನತಿ ಹೊಂದಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್‌ಗೆ ವರ್ಗಾವಣೆಗೊಂಡಿದ್ದ ಕುಸುಮಾಧರ್‌ರನ್ನು ಸರಕಾರ ಮತ್ತೆ ಬೆಳ್ತಂಗಡಿಗೆ ವರ್ಗಾವಣೆಗೊಳಿಸಿದ್ದು; ಜುಲೈ 29ರಂದು […]

ತಾಲೂಕಲ್ಲಿ ಮಿತಿಮೀರಿದ ಅಕ್ರಮ ಗೋಸಾಗಾಟ

ಧರ್ಮಸ್ಥಳದಲ್ಲಿ ಅಕ್ರಮ ಗೋಸಾಗಾಟ ಪತ್ತೆ ಬೆಳ್ತಂಗಡಿ: ಜುಲೈ 28ರ ರಾತ್ರಿ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಈಚರ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಸ್ಥಳೀಯ ಭಜರಂಗದಳದ ಯುವಕರು; ವಾಹನವನ್ನು ತಡೆದು ನಿಲ್ಲಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಸಬ್‌ಇನ್ಸ್‌ಪೆಕ್ಟರ್ ನಂದಕುಮಾರ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ಸಬ್‌ಇನ್ಸ್‌ಪೆಕ್ಟರ್ ಪವನ್ ಕುಮಾರ್ ಅಕ್ರಮ ಗೋಸಾಗಾಟಗಾರರನ್ನು ಬಂಧಿಸಿ, ಈಚರ್ ವಾಹನ ಸಹಿತ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 9 ಜಾನುವಾರುಗಳನ್ನು ಮುಟ್ಟುಗೋಲು ಹಾಕಿದ್ದಾರೆ. […]

ಅಕ್ರಮ ಗೋಮಾಂಸ ಸಾಗಾಟ ಪತ್ತೆ

70ಕೆ.ಜಿ. ಗೋಮಾಂಸ ಸಹಿತ ಆರೋಪಿ ಪೊಲೀಸ್ ವಶಕ್ಕೆ ಬೆಳ್ತಂಗಡಿ: ಅಟೋವೊಂದರಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟವಾಗುತ್ತಿದ್ದುದನ್ನು ಕಂಡ ಸ್ಥಳೀಯ ಯುವಕರ ತಂಡ, ಅಟೋವನ್ನು ತಡೆದು ನಿಲ್ಲಿಸಿ, ಗೋಮಾಂಸ ಸಹಿತ ಅಟೋ‌ ರಿಕ್ಷಾದೊಂದಿಗದ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರಿಗೊಪ್ಪಿಸಿದ ಘಟನೆ ಜುಲೈ 27ರಂದು ಮಿತ್ತಬಾಗಿಲು ಗ್ರಾಮದ ಎರ್ಮಾಳ್‌ಪಲ್ಕೆಯಿಂದ ವರದಿಯಾಗಿದೆ.ಸುಮಾರು 70 ಕೆಜಿ ಗೋಮಾಂಸವನ್ನು ರಿಕ್ಷಾದಲ್ಲಿ ಹೇರಿಕೊಂಡು ಕಾಜೂರು ಕಡೆಯಿಂದ ಎರ್ಮಾಳಪಲ್ಕೆ – ಕುಕ್ಕಾವು ರಸ್ತೆಯಾಗಿ ಬರುತ್ತಿದ್ದಾಗ ಮಾಹಿತಿ ಪಡೆದು ತಡೆದ ಯುವಕರು ಅಕ್ರಮ ಗೋಮಾಂಸ ಸಾಗಾಟದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ […]

ಶಾಸಕರ ಹಾದಿ ತಪ್ಪಿಸುವ ಅಧಿಕಾರಿಗಳು

ಅಪಾಯದಂಚಿನಲ್ಲಿ ಕೊರೋನಾ ವಾರಿಯರ್ಸ್ ಬೆಳ್ತಂಗಡಿ: ಹೊರ ದೇಶದಿಂದ ಬಂದವರಿಂದ ಕೊರೋನಾ ಸೋಂಕು ಹರಡಿದ್ದಾಯಿತು. ಹೊರ ರಾಜ್ಯದಿಂದ ಬಂದವರು ನಮ್ಮ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಹರಡಿದ್ದೂ ಆಯಿತು. ಇದೀಗ ಆರಂಭದಿಂದಲೂ ಹಳ್ಳಿಹಳ್ಳಿಗಳಲ್ಲಿ ಕೊರೋನಾ ಸೋಂಕಿನ ವಿರುದ್ಧ ಜನಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಆಶಾಕಾರ್ಯಕರ್ತೆಯರ ಸರದಿ. ಇವರನ್ನು ಇದೀಗ ತಮ್ಮ ಜೀವವನ್ನೇ ಅಪಾಯಕ್ಕೊಡ್ಡಿ ತಮಗೆ ಮಾಹಿತಿ ಅಥವಾ ಸೂಕ್ತ ತರಬೇತಿಯೇ ಇಲ್ಲದ ಕಾರ್ಯಕ್ಕೆ ಬಳಸಿಕೊಳ್ಳಲು ಸರಕಾರ ತೀರ್ಮಾನಿಸಿದಂತಿದೆ. ಈ ಕೊರೋನಾ ವಾರಿಯರ್ಸ್ ಕಳೆದ ಕೆಲ ತಿಂಗಳುಗಳಿಂದ ತಮ್ಮ ಜೀವವನ್ನೇ […]