ನಾವೂರಿನಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ: ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಎಪ್ರಿಲ್ 5ನೇ ತಾರೀಕಿನಂದು ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ) ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್ (ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಅವಕಾಶಗಳ ಕುರಿತು ಸಮಗ್ರ ಮಾಹಿತಿಯ ‘ಶೈಕ್ಷಣಿಕ ಮಾಹಿತಿ ಕಾರ್ಯಾಗಾರ’ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೋ. ಡಾ. ಪ್ರಕಾಶ್ ಪ್ರಭು ನೆರವೇರಿಸಿ ‘ಗ್ರಾಮೀಣ ಭಾಗದ […]
ಬಿಜೆಪಿಯ ಸ್ಥಾಪನಾ ದಿನ
ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನವನ್ನು ಏಪ್ರಿಲ್ 06ರಂದು ಬೆಳ್ತಂಗಡಿಯ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದಿನದ ಮಹತ್ವ ವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬಿ.ಎಸ್. ತಿಳಿಸಿದರು. ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಶುಭಹಾರೈಕೆ ಮಾಡಿದರು. ವಿಧಾನ ಪರಿಷತ್ ಶಾಸಕರಾಗಿರುವ ಪ್ರತಾಪ್‌ಸಿಂಹ ನಾಯಕ್ ಉಪಸ್ಥಿತರಿದ್ದರು, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. r
ಉಜಿರೆಯಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ’ಎಸ್‌ಡಿಎಂ ಉದ್ಯೋಗಂ -2026′

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಸಹಯೋಗದಲ್ಲಿ ಉಜಿರೆಯಲ್ಲಿ ಎಪ್ರಿಲ್ 6 ಮತ್ತು 7 ರಂದು ‘ಎಸ್‌ಡಿಎಂ ಉದ್ಯೋಗಂ 2026’ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅವರು ಕಾಲೇಜಿನಲ್ಲಿ ಎಪ್ರಿಲ್ 2ರಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.ಉದ್ಯೋಗ […]
ಜೈನರ ನಿಯೋಗದಿಂದ ಸಿಎಂ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮೇ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿದ ಜೈನ ಧರ್ಮೀಯರ ನಿಯೋಗ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾಭಿರಾಜ್ ಜೈನ್, ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯ ಕುಮಾರ್ ಕಾರ್ಯತ್ತಡ್ಕ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮತ್ತಿತರರು ಹಾಜರಿದ್ದರು.
ಕಾಮೋಡ್ ವ್ಹೀಲ್ ಚೇರ್ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ವಲಯದ ಬಯಲು ನಿವಾಸಿಗಳಾದ ಜಯಂತ್ ಶೆಣೈ ಹಾಗೂ ವಿದ್ಯಾ ದಂಪತಿಗಳ ಮಗಳು 22ರ ವಯೋಮಾನದ ಶ್ವೇತಾರವರಿಗೆ ನಡೆದಾಡಲು ಶಕ್ತಿ ಇಲ್ಲದೇ ಇದ್ದು; ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವ್ಹೀಲ್ ಚಯರ್‌ನ್ನು ಜನಜಾಗೃತಿ ವೇದಿಕೆಯ ವಲಯ ಕೋಶಾಧಿಕಾರಿ ಶರೀಫ್ ಕೆ., ವಲಯ ಅಧ್ಯಕ್ಷ ಸತೀಶ್ ಕುಕ್ಕೆಜಾಲು, ಒಕ್ಕೂಟದ […]
ಉಜಿರೆ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ
ಬೆಳ್ತಂಗಡಿ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆಯೋಜಿಸಿದ್ದ ಮಹಾತ್ಮಾ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಮಹಾತ್ಮಾ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಮಾರ್ಚ್ 24ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.5 ಲಕ್ಷ ರೂಪಾಯಿ ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, […]
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಜನಾ ಕಮ್ಮಟಕ್ಕೆ ಮುಹೂರ್ತ ಫಿಕ್ಸ್
ಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 24ನೇ ವರ್ಷದ ಭಜನಾ ತರಬೇತಿ ಶಿಬಿರಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು; ಸೆಪ್ಟೆಂಬರ್ 16ರಿಂದ ಸೆಪ್ಟೆಂಬರ್ 23ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಭಜನಾ ಸಮಿತಿಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.ಈ ಬಾರಿಯ ಭಜನಾ ತರಬೇತಿ ಶಿಬಿರದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಉತ್ತರ ಕನ್ನಡ, ಚಿಕ್ಕಮಗಳೂರು, , ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಹಾಸನ, ಬೆಳಗಾವಿ, ಮಂಡ್ಯ ಜಿಲ್ಲೆಗಳ ಆಯ್ದ ಭಜನಾ […]
ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಸಂವಾದ

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಜಕೀಯ ಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಜುಲೈ 12ರಂದು ಮಡಂತ್ಯಾರು ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಂ. ವಹಿಸಿದ್ದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಮಾತನಾಡಿ, ಗ್ರಾಮ ಪಂಚಾಯಿತ್ ಎಂದರೇನು ಮತ್ತು ಸದಸ್ಯರ ಕಾರ್ಯ ಚಟುವಟಿಕೆಗಳು, ಗ್ರಾಮ ಪಂಚಾಯಿತ್ ಎದುರಿಸುತ್ತಿರುವ ಸವಾಲುಗಳು ಯಾವುದೆಲ್ಲ ಇವುಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ವಿದ್ಯಾರ್ಥಿಗಳು ಕೇಳಿದಂತಹ ಪ್ರಶ್ನೆಗಳಿಗೆ […]
ಎನ್‌ಸಿಸಿ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ: 18 KAR BN ಎನ್‌ಸಿಸಿ ವಿಭಾಗದ 2022-23ನೇ ಶೈಕ್ಷಣಿಕ ವರ್ಷದ ಮೊದಲ ವಾರ್ಷಿಕ ತರಬೇತಿ ಶಿಬಿರವು ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಮುಕ್ತಾಯಗೊಂಡಿತು2022ರ ಜೂನ್ 23ರಿಂದ ಹತ್ತು ದಿನಗಳ ಕಾಲ ಈ ಶಿಬಿರವು ನಡೆಯಿತು. ಆಡಳಿತ ಅಧಿಕಾರಿ 18 KAR BN ಎನ್‌ಸಿಸಿ ಕರ್ನಲ್ ಅಮಿತಾಬ್ ಸಿಂಗ್, 18 KAR BN ಎನ್‌ಸಿಸಿ ರಾಜು ಗುರುಂಗ್ ಎಸ್. ಎಂ. ಉಪಸ್ಥಿತರಿದ್ದರುಈ ವಾರ್ಷಿಕ ತರಬೇತಿ ಶಿಬಿರವನ್ನು ನಡೆಸಲು ಅನುಮತಿಸಿದ ಸೇಕ್ರೆಡ್ ಹಾರ್ಟ್ ಸಂಸ್ಥೆಯ ಸಂಚಾಲಕರಾದ ವಂದನೀಯ ಬಾಸಿಲ್ […]
ಬೆಳ್ತಂಗಡಿಯಲ್ಲಿ ಭೂಕಂಪ?-ವದಂತಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೆಲವೆಡೆ ಭೂಕಂಪನವಾದ ಬಗ್ಗೆ ವದಂತಿಗಳು ಹರಿದಾಡುತ್ತಿದ್ದು; ಈ ಬಗ್ಗೆ ತಾಲೂಕು ಆಡಳಿತ ಯಾವುದೇ ದೃಢೀಕರಣ ನೀಡಿಲ್ಲ. ಈ ಭೂಕಂಪನ ಎಲ್ಲಿ ಎಷ್ಟು ಹೊತ್ತಿಗೆ ಆಯಿತು ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ.